Vijay Mathikatti
General Secretary-Karnataka Pradesh Congress Committee,ಹೆಮ್ಮೆಯ ಕನ್ನಡಿಗ/ ಧಾರವಾಡದವ
14/09/2026
ನಾಡಿನ ಸಮಸ್ತ ಜನತೆಗೆ "ಗಣೇಶ ಚತುರ್ಥಿಯ" ಹಾರ್ದಿಕ ಶುಭಾಶಯಗಳು!!
ವಿಘ್ನವಿನಾಶಕ ಶ್ರೀ ಗಣೇಶನು ನಿಮ್ಮ ಹಾಗೂ ನಿಮ್ಮ ಕುಟುಂಬದ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ.
ಎಲ್ಲಾ ವಿಘ್ನಗಳು ದೂರವಾಗಿ, ನಿಮ್ಮ ಎಲ್ಲಾ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ.
21/08/2026
ನಾಡಿನ ಸಮಸ್ತ ಜನತೆಗೆ " ಶ್ರೀ ವರಮಹಾಲಕ್ಷ್ಮಿ ಹಬ್ಬದ" ಹಾರ್ದಿಕ ಶುಭಾಶಯಗಳು
15/08/2026
🇮🇳 ದೇಶದ ಸಮಸ್ತ ಜನತೆಗೆ 80 ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು! 🇮🇳
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ದೇಶದ ಏಕತೆ, ಶಾಂತಿ ಮತ್ತು ಪ್ರಗತಿಗಾಗಿ ನಾವೆಲ್ಲರೂ ಕೈಜೋಡಿಸೋಣ.
“ದೇಶದ ಹೆಮ್ಮೆ ನಮ್ಮೆಲ್ಲರ ಹೊಣೆ — ದೇಶದ ಪ್ರಗತಿಯೇ ನಮ್ಮ ಸಂಕಲ್ಪ.”
ಜೈ ಹಿಂದ್ 🇮🇳 | ವಂದೇ ಮಾತರಂ 🇮🇳
*ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ*
*30 ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ*
ಬಿಡದಿ ಟೌನ್ ಶಿಪ್ (ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ.
ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಈ ಯೋಜನೆಗೆ ಯಾರಿಂದಲೂ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಮಿತಿಯು ಸದರಿ ಯೋಜನೆಯನ್ನು ಕಾನೂನಾತ್ಮಕ, ಮಾನವೀಯತೆ ಹಾಗೂ ಸಮಗ್ರ ಅಭಿವೃದ್ದಿಯ ಚೌಕಟ್ಟಿನಲ್ಲಿ ವಿಶ್ಲೇಷಣೆಗೊಳಪಡಿಸಿ ತನ್ನ ಶಿಫಾರಸ್ಸನ್ನು ನೀಡಲಿದೆ.
2006ನೇ ಸಾಲಿನಲ್ಲಿ ಬಿಡದಿ ಬಳಿ ಸಮಗ್ರ ಉಪ ನಗರವನ್ನು ಅಭಿವೃದ್ಧಪಡಿಸಲು ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಬೆಂಗಳೂರಿನ ಸಮೀಪ ಬಂಡವಾಳ ಹೂಡಿಕೆಗೆ ಬೇಡಿಕೆ ಹೆಚ್ಚಾಗಿದ್ದು, ನನೆಗುದಿಗೆ ಬಿದ್ದಿದ್ದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಜನವಸತಿ ಪ್ರದೇಶಗಳ ಕನಿಷ್ಟ ಸ್ಥಳಾಂತರ ಮತ್ತು ಭೂಮಾಲೀಕರಿಗೆ ಉತ್ತಮ ಮೌಲ್ಯ ಒದಗಿಸುವ ಆಶಯದೊಂದಿಗೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಮುಂದುವರೆಸಲು ಸರ್ಕಾರವು ತೀರ್ಮಾನಿಸಿದೆ.
ಯೋಜನೆಯನ್ನು ಜನಸ್ನೇಹಿಯಾಗಿ ಜಾರಿಗೊಳಿಸಲು ಸಾರ್ವಜನಿಕರ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಾಗಿ ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಯೋಜನೆಯನ್ನು ಮತ್ತಷ್ಟು ಉತ್ತಮವಾಗಿ ರೂಪಿಸುವುದು ಸರ್ಕಾರದ ಆಶಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಮಿತಿ ರಚನೆಯನ್ನು ಮಾಡಿದೆ.
DK Shivakumar👏👏🙏
29/07/2026
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಾಮಾಜಿಕ ನ್ಯಾಯದ ಪ್ರತಿಪಾದಕರು ಶ್ರೀ ಬಿ.ಕೆ.ಹರಿಪ್ರಸಾದ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು
25/07/2026
ನನ್ನ ಪ್ರೀತಿಯ ಅಮ್ಮನಿಗೆ ಭಾವಪೂರ್ಣ ನಮನಗಳು.
ನನ್ನ ಜೀವನದ ಮೊದಲ ಗುರು, ಮೊದಲ ಸ್ನೇಹಿತೆ, ನನ್ನ ಶಕ್ತಿ ಮತ್ತು ಪ್ರೇರಣೆಯಾಗಿದ್ದ ನನ್ನ ಪ್ರೀತಿಯ ಅಮ್ಮ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.
ನಿಮ್ಮ ಪ್ರೀತಿ, ತ್ಯಾಗ, ಆಶೀರ್ವಾದ ಮತ್ತು ಬದುಕಿನ ಮೌಲ್ಯಗಳು ಸದಾ ನನ್ನೊಂದಿಗೆ ಇರುತ್ತವೆ. ನಿಮ್ಮ ಸ್ಥಾನವನ್ನು ಯಾರೂ ತುಂಬಲಾರರು. ನಿಮ್ಮ ನೆನಪುಗಳು ನನ್ನ ಜೀವನದ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನನ್ನು ಮುನ್ನಡೆಸುತ್ತವೆ.
ಅಮ್ಮಾ, ನಿಮ್ಮ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ🙏🙏
21/07/2026
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರೂ ಹಾಗೂ ಹಿರಿಯ ರಾಜಕೀಯ ನೇತಾರರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
16/07/2026
ಮಾನ್ಯ ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಆಯ್ಕೆಯಾಗಿರುವ
ಶ್ರೀ ಜಿ.ಸಿ.ಚಂದ್ರಶೇಖರ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು
09/07/2026
ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಆರಂಭಗೊಂಡಿದೆ. ಜೂನ್ 30 ರಿಂದ ಜುಲೈ 29, 2026 ರವರೆಗೆ ನಿಮ್ಮ ಮನೆಗೆ ಭೇಟಿ ನೀಡುವ ಬಿಎಲ್‌ಒ (BLO) ಅಧಿಕಾರಿಗಳಿಗೆ ನಿಖರ ಮಾಹಿತಿ ನೀಡಿ ಸಹಕರಿಸಿ. ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಹೆಸರು ಕೈಬಿಟ್ಟು ಹೋಗಿದ್ದರೆ ಸರಿಪಡಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಿ. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ.
The SPECIAL INTENSIVE REVISION (SIR) process has officially begun. I urge all citizens to actively participate from 30 June to 29 July 2026. Please extend your full cooperation to the Booth Level Officers (BLOs) during their house-to-house visits to ensure your voter details—whether it is a new registration, correction, or verification—are accurate. Let us work together to ensure no eligible voter is left out of the electoral roll.
01/07/2026
ವೈದ್ಯರ ದಿನದ ಹಾರ್ದಿಕ ಶುಭಾಶಯಗಳು! 💐
ನಮ್ಮ ಆರೋಗ್ಯವೇ ನಮ್ಮ ಸಂಪತ್ತು. ಅದನ್ನು ಕಾಪಾಡಲು ತಮ್ಮ ಜ್ಞಾನ, ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರಿಗೆ ಹೃತ್ಪೂರ್ವಕ ನಮನಗಳು.
ನಿಮ್ಮ ನಿಸ್ವಾರ್ಥ ಸೇವೆ ಸಮಾಜಕ್ಕೆ ಸದಾ ಸ್ಫೂರ್ತಿದಾಯಕವಾಗಿರಲಿ. ನಿಮ್ಮ ಜೀವನ ಆರೋಗ್ಯ, ಸಂತೋಷ ಮತ್ತು ಯಶಸ್ಸಿನಿಂದ ತುಂಬಿರಲಿ.
ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಹಾರ್ದಿಕ ಶುಭಾಶಯಗಳು! 👨⚕️👩⚕️🙏
Category
Website
Address
Dharwad
Alerts
Be the first to know and let us send you an email when Vijay Mathikatti posts news and promotions. Your email address will not be used for any other purpose, and you can unsubscribe at any time.